Home ಕರಾವಳಿ ರೌಡಿಶೀಟರ್ ಸುಹಾಸ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ: ಶರಣ್ ಪಂಪ್‌ವೆಲ್ ವಿರುದ್ಧ...

ರೌಡಿಶೀಟರ್ ಸುಹಾಸ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ: ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

0

ಮಂಗಳೂರು: ರೌಡಿಶೀಟರ್ ಸುಹಾಸ್ ಹತ್ಯೆ ಬೆನ್ನಲ್ಲೇ ನಗರದ ಕುಂಟಿಕಾನ ಎ ಜೆ ಆಸ್ಪತ್ರೆಯ ಹೊರಾಂಗಣದಲ್ಲಿ ಮೇ 2, 2025 ರಂದು ಮಧ್ಯರಾತ್ರಿ 12:50ಕ್ಕೆ ಮಾಧ್ಯಮಗೋಷ್ಠಿ ನಡೆಸಿದ ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್, ದಕ್ಷಿಣ ಕನ್ನಡ ಜಿಲ್ಲೆಯನ್ನು ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಿದ್ದಲ್ಲದೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರಿಂದ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶರಣ್ ಪಂಪ್ ವೆಲ್ ಕರೆ ನೀಡಿದ ಬಂದ್‌ಗೆ ಸಾರ್ವಜನಿಕರು ಸ್ಪಂದಿಸದ ಕಾರಣ ಮಂಗಳೂರು ನಗರದಲ್ಲಿ ಎಂದಿನಂತೆ ವಾಹನ ಸಂಚಾರವಿತ್ತು ಮತ್ತು ಅಂಗಡಿ ಮುಗ್ಗಟ್ಟುಗಳು ತೆರೆದಿದ್ದವು. ಆದರೆ, ಶರಣ್ ಪಂಪ್ ವೆಲ್ ನೀಡಿದ ಪ್ರಚೋದನಕಾರಿ ಹೇಳಿಕೆಯಿಂದ ಪ್ರೇರಿತರಾದ ಆತನ ಬೆಂಬಲಿಗರು ನಗರದ ವಿವಿಧೆಡೆ ಸರ್ಕಾರಿ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ್ದಾರೆ. ಇದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಎರಡು ಕೋಮುಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶರಣ್ ಪಂಪ್ ವೆಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 75/2025 ಕಲಂ 353(2), 196(1)(29), 49, 324(2)(4)(5) ಬಿ.ಎನ್.ಎಸ್ ‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version