Home ಟಾಪ್ ಸುದ್ದಿಗಳು SDPI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದ.ಕ ಜಿಲ್ಲಾ ಸಮಿತಿಯಿಂದ ಧ್ವಜಾರೋಹನ ಮತ್ತು ಸಭಾ ಕಾರ್ಯಕ್ರಮ

SDPI ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದ.ಕ ಜಿಲ್ಲಾ ಸಮಿತಿಯಿಂದ ಧ್ವಜಾರೋಹನ ಮತ್ತು ಸಭಾ ಕಾರ್ಯಕ್ರಮ

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ ಡಿಪಿಐ )ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆ ಇಂದು ಜಿಲ್ಲಾದ್ಯಂತ  ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಬಿಸಿ ರೋಡ್ ಕೈಕಂಬ ಕಚೇರಿಯಲ್ಲಿ ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ಜರಗಿತು.

ಪಕ್ಷದ ರಾಷ್ಟ್ರೀಯ ಪ್ರಧಾನ  ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ  ಧ್ವಜಾರೋಹಣ  ನೆರವೇರಿಸಿ ನಂತರ  ನಡೆದ ಸಭಾ ಕಾರ್ಯಕ್ರಮದಲ್ಲಿ ಸಂದೇಶ ಭಾಷಣ ಮಾಡಿ ಮಾತಾಡುತ್ತಾ ಪಕ್ಷವು  ಕಳೆದ 15 ವರ್ಷದದಲ್ಲಿ ನಡೆಸಿದ ಹೋರಾಟ ರಾಜಕೀಯದ ಬಗ್ಗೆ ವಿವರಿಸಿ ಪಕ್ಷವನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಿಷ್ಠಗೊಳಿಸಿ ಹಸಿವು ಮುಕ್ತ ಮತ್ತು ಭಯ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು  ಕಟಿಬದ್ಧರಾಗಬೇಕೆಂದು ಕರೆ ನೀಡಿದರು .

 ಸಭಾ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್  ಬಜತ್ತೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು .ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ,ದಕ್ಷಿಣ  ಕನ್ನಡ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ , ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಮುನೀಶ್ ಅಲಿ ,ವಿಮ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ ,ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ,   ಝೀನತ್ ಗೂಡಿನಬಳಿ, ಉಪಸ್ಥಿತರಿದ್ದರು .ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಅಶ್ರಫ್ ಅಡ್ಡೂರು ಸ್ವಾಗತಿಸಿ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.

Join Whatsapp
Exit mobile version