ಮತೀಯ ಕೊಲೆಗೆ ಪರಿಹಾರ ನೀಡುವಲ್ಲಿ ತಾರತಮ್ಯ: ಸಿಎಂ ಭೇಟಿಯಾದ ದ.ಕ. ಜಿಲ್ಲಾ ಅಲ್ಪಸಂಖ್ಯಾತ ನಿಯೋಗ

Prasthutha|

ಸೂಕ್ತ ಪರಿಹಾರ ಒದಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

- Advertisement -


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮಧಾರಿತವಾಗಿ ನಡೆದ ಕೊಲೆ ಪ್ರಕರಣದಲ್ಲಿ ಪರಿಹಾರ ನೀಡುವಲ್ಲಿ ತಾರತಮ್ಯ ನಡೆದಿದ್ದು, ಈ ಬಗ್ಗೆ ಸಮಾನವಾಗಿ ನ್ಯಾಯಯುತ ಪರಿಹಾರ ನೀಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.


ಮನವಿಗೆ ತಕ್ಷಣ ಸ್ಪಂದಿಸಿದ ಸಿದ್ದರಾಮಯ್ಯ ಅವರು ಎಲ್ಲರಿಗೂ ಸೂಕ್ತ ಪರಿಹಾರ ಹಾಗೂ ಎಲ್ಲಾ ಕುಟುಂಬಗಳಿಗೆ ಸರಕಾರಿ ಉದ್ಯೋಗ ನೀಡುವುದಾಗಿ ಸರಕಾರ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ ಎಂದು ನಿಯೋಗ ತಿಳಿಸಿದೆ.

- Advertisement -


ನಿಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶ್ರೀ ಶಾಹುಲ್ ಹಮೀದ್ ಕೆ ಕೆ, ಕೆಪಿಸಿಸಿಯ ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹಬೀಬುಲ್ಲ ಕಣ್ಣೂರ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಮೀರ್ ಕಾಟಿಪಳ್ಳ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜಲೀಲ್ ಬದ್ರಿಯಾ, ಜಿಲ್ಲಾ ಉಪಾಧ್ಯಕ್ಷರಾದ ಹಸನಬ್ಬ ಚಾರ್ಮಾಡಿ, ಎಂ ಜಿ ತಲ್ಹತ್ ಬೆಳ್ತಂಗಡಿ , ಉಪಸ್ಥಿತರಿದ್ದರು.


ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ಯುಟಿ ಖಾದರ್ ಮತ್ತು ಮಾಜಿ ಶಾಸಕರಾದ ಶ್ರೀ ಐವನ್ ಡಿಸೋಜ KPCC ಪ್ರಧಾನ ಕಾರ್ಯಾದರ್ಶಿಯಾದ ಇನಾಯತ್ ಅಲಿ ರವರು ಮಾರ್ಗದರ್ಶನ ನೀಡಿದ್ದಾರೆ.

Join Whatsapp