NEET ಪರೀಕ್ಷೆ ಅಕ್ರಮ ವಿರೋಧಿಸಿ ಕಾಂಗ್ರೆಸ್’ನಿಂದ ಸಂಸತ್ ಚಲೋ: ದ.ಕ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ಭಾಗಿ

Prasthutha|

ದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಸಂಸತ್ ಚಲೋ  ಅಭಿಯಾನದ ಪ್ರಯುಕ್ತ  ರಾಷ್ಟ್ರೀಯ ಯುವ ಕಾಂಗ್ರೆಸ್  ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ದೆಹಲಿಯಲ್ಲಿ ಧರಣಿ ನಡೆಯಿತು.

- Advertisement -

ಕರ್ನಾಟಕದಿಂದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಳಪಾಡ್ ನೇತೃತ್ವದಲ್ಲಿ ಎಲ್ಲಾ  ಜಿಲ್ಲೆಗಳ ಯುವ ಕಾಂಗ್ರೆಸ್ ಪದಾಧಿಕಾರಿಗಳು ಧರಣಿಯಲ್ಲಿ ಭಾಗವಹಿಸಿದ್ದರು.

ದಕ್ಷಿಣ ಕನ್ನಡದಿಂದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ  ಗಿರೀಶ್ ಆಳ್ವ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ , ಮುಲ್ಕಿ ಯುವಕಾಂಗ್ರೆಸ್ ಅಧ್ಯಕ್ಷ  ಅಶೋಕ್ ಹಾಗು ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ  ಎಸ್ ಕೆ ಹಕೀಮ್ ಕೊಕ್ಕಡ ಭಾಗವಹಿಸಿದ್ದರು.

- Advertisement -

ಧರಣಿಯಲ್ಲಿ ಭಾಗವಹಿಸಿದ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸ್ ಬಂಧಿಸಿ ಬಿಡುಗಡೆ ಮಾಡಿದರು.

Join Whatsapp
Exit mobile version