ದಕ್ಷಿಣ ಕನ್ನಡ: 9,10ನೇ ತರಗತಿಗಳ ಆರಂಭ ಮುಂದೂಡಿಕೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪಾಸಿಟಿವಿ ದರ ಶೇ.2ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳನ್ನು ಪ್ರಾರಂಭಿಸುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಾಲಾ ಪ್ರಾರಂಭದ ದಿನಾಂಕವನ್ನು ಮುಂದೆ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

- Advertisement -

ರಾಜ್ಯದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ 9 ಹಾಗೂ 10ನೇ ತರಗತಿಗಳ ತರಗತಿಗಳ ಶಾಲಾ ಪ್ರಾರಂಭವನ್ನು ಮುಂದೂಡಲಾಗಿದೆ.

Join Whatsapp