ದಕ್ಷಿಣ ಕನ್ನಡ: ಜಿಲ್ಲೆಯ ಹಲವು ನಾಯಕರನ್ನು ಭೇಟಿಯಾದ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್

Prasthutha|

ಮಂಗಳೂರು: ಎರಡು ದಿನಗಳ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಂಡಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ದಲಿತ ಸಮುದಾಯದ ಮುಖಂಡರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಮತ್ತು SDPI ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ರವರ ನೇತೃತ್ವದ ತಂಡ ಜಿಲ್ಲೆಯ ಹಲವಾರು ನಾಯಕರನ್ನು ಭೇಟಿ ಮಾಡಿದೆ.

- Advertisement -

ಪಕ್ಷದ ಔಟ್ ರೀಚ್ ಘಟಕದ ಭಾಗವಾಗಿ ಕೈಗೊಂಡಿರುವ ಈ ಪ್ರವಾಸ ದಲ್ಲಿ ಜಿಲ್ಲೆಯ ಹಲವಾರು ಸಂಘಟನೆಗಳ ಮುಖಂಡರು, ಸಮಾಜದ ಗಣ್ಯ ವ್ಯಕ್ತಿಗಳನ್ನು ಬೇಟಿಯಾಗಿ ಪ್ರಸಕ್ತ ದೇಶದ ಪರಿಸ್ಥಿತಿ,ತಳ ಸಮುದಾಯಗಳ ಮೇಲೆ ನಡೆಯುತ್ತಿರುವ ಶೋಷಣೆ , ಅಲ್ಪಸಂಖ್ಯಾತ ಮತ್ತು ದಲಿತ ಸಮುದಾಯಗಳು ಒಗ್ಗೂಡಬೇಕಾದ ಅನಿವಾರ್ಯತೆ ದೇಶದಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ SDPI ಪಕ್ಷದ ಬೆಳವಣಿಗೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು .

ಪಕ್ಷದ ಬೆಳವಣಿಗೆ, ನಿರ್ವಹಿಸುತ್ತಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ದಲಿತ ಸಂಘಟನೆಗಳ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ಗಣೇಶ್ ಗುರಿಯಾನ, ದಲಿತ ಸಂಘರ್ಷ ಸಮಿತಿಯ (ಪ್ರೊ, ಕ್ರಷ್ಣಪ್ಪ ಸ್ಥಾಪಿತ) ರಾಜ್ಯ ನಾಯಕರಾದ ಎಂ ದೇವದಾಸ್, ಡಿಎಸ್ಎಸ್ ಜಿಲ್ಲಾ ಮುಖಂಡರಾದ ರಘು ಎಕ್ಕಾರ್, ಜಿಲ್ಲಾ ಮಹಿಳಾ ಒಕ್ಕೂಟದ ಮುಖಂಡೆ ಸರೋಜಿನಿ, ಇತರ ಮುಖಂಡರಾದ ಎಸ್ ಪಿ ಆನಂದ್, ಕಾಂತಪ್ಪ ಅಲಂಕಾರ್ ಹಾಗೂ ಇತರರು ಉಪಸ್ಥಿತರಿದ್ದರು.

Join Whatsapp