ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29ರಿಂದ ಆರಂಭವಾಗುತ್ತಿದ್ದು, ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ.
ಅಪ್ಪಟ ಸಿನಿಮಾ ಪ್ರೇಮಿಯಾಗಿರುವ ಡಾಲಿ ಧನಂಜಯ್ ಅವರನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ.
15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಫೆಬ್ರವರಿ 29ರಂದು ವಿಧಾನಸೌಧದ ಮುಂಭಾಗ ನಡೆಯುವ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಳ್ಳಲಿದ್ದು, ಮಾರ್ಚ್ 7 ರವರೆಗೆ ನಡೆಯಲಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ. ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.