ದಲಿತರ ಮೇಲೆ ದೌರ್ಜನ್ಯ ಕೇಸ್: 98 ಜನರಿಗೆ ಜೀವಾವಧಿ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Prasthutha|

- Advertisement -

ಕೊಪ್ಪಳ್ಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ.

2014ರಲ್ಲಿ ನಡೆದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಇಂದು (ಅಕ್ಟೋಬರ್ 24) ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

- Advertisement -

ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೋಂಬಿ ಸೇರಿದಂತೆ ಇನ್ನಿತರ ಸೆಕ್ಷನ್ ನಲ್ಲಿ ​ ಐದು ವರ್ಷ ಶಿಕ್ಷೆ ವಿಧಿಸಿದೆ.

ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಿದೆ.

2014 ರ ಆಗಸ್ಟ್ 28 ರಂದು ನಡೆದಿದ್ದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇನ್ನು ಮೊನ್ನೇ ಅಂದರೆ ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ​ ಇಂದಿಗೆ (ಅಕ್ಟೋಬರ್ 24) ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ಕೋರ್ಟ್​ ಅಂತಿಮ ತೀರ್ಪು ನೀಡಿದೆ.



Join Whatsapp