ಕೊಪ್ಪಳ : ಕ್ಷೌರ ಮಾಡಿಕೊಳ್ಳಲು ತೆರಳಿದ್ದ ಇಬ್ಬರು ದಲಿತ ಯುವಕರ ಮೇಲೆ ಜಾತಿವಾದಿ ಗೂಂಡಾಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಡಿಗೆ ಸಂಬಂಧಿಸಿದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಾದಿಗ ಸಮಾಜದವರಿಗೆ ಜಾತಿಯ ಕಾರಣಕ್ಕಾಗೊ ಕ್ಷೌರ ಮಾಡಲು ನಿರಾಕರಿಸಲಾಗಿತ್ತು ಎನ್ನಲಾಗಿದೆ. ಜೂ.6ರಂದು ಗ್ರಾಮದ ಸಣ್ಣ ಹನುಮಂತ ಮತ್ತು ಬಸವರಾಜು ಎಂಬವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದ ವೇಳೆ, ಜಾತಿವಾದಿಗಳ ಗುಂಪೊಂದು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ಮಾಡಿದೆ. ಗಾಯಾಳು ಯುವಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿ 16 ಮಂದಿ ವಿರುದ್ಧ ಎಸ್ ಸಿ/ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಮತ್ತು ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.