ದಲಿತ ಬಾಲಕ ದೇಗುಲ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿ, ಶುದ್ಧೀಕರಣ: ಐವರ ವಿರುದ್ಧ ಪ್ರಕರಣ ದಾಖಲು

Prasthutha|

ಕೊಪ್ಪಳ: ದಲಿತ ಬಾಲಕನೊಬ್ಬ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಂಡ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಕನಕಪ್ಪ ಪೂಜಾರಿ, ಹನಮಗೌಡ, ಗವಿ ಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ ಶರಣಗೌಡ, ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳದ ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದಲ್ಲಿ ಸೆ.4ರಂದು ಮೂರು ವರ್ಷದ ಪುಟ್ಟ ಬಾಲಕನ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆ ಪೋಷಕರೊಂದಿಗೆ ಈತ ದೇವಸ್ಥಾನ ಪ್ರವೇಶ ಮಾಡಿದ್ದನು. ಇದನ್ನು ವಿರೋಧಿಸಿದ ಮಿಯಾಪುರ ಗ್ರಾಮದ ಸವರ್ಣಿಯರು ದಲಿತ ಬಾಲಕನ ಕುಟುಂಬಕ್ಕೆ 23 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಇದರ ವಿರುದ್ಧ ಅನ್ಯಾಯಕ್ಕೆ ಒಳಗಾದ ಸಮುದಾಯ ಪ್ರತಿಭಟನೆಯನ್ನು ಮಾಡಿತ್ತು.

Join Whatsapp