19ರ ಹರೆಯದ ದಲಿತ ಬಾಲಕಿಯ ಮೇಲೆ ಸವರ್ಣೀಯರಿಂದ ಸಾಮೂಹಿಕ ಅತ್ಯಾಚಾರ, ಕೊಲೆ ಯತ್ನ । ಐಸಿಯುನಲ್ಲಿ ಬಾಲಕಿ

Prasthutha|

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ 19 ವರ್ಷದ ದಲಿತ ಬಾಲಕಿಯನ್ನು ಮೇಲ್ಜಾತಿಯ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ವರದಿಯಾಗಿದೆ. ಅತ್ಯಾಚಾರದ ನಂತರ ಆರೋಪಿಗಳು ಸಂತ್ರಸ್ತೆಯ ಕತ್ತು ಹಿಸುಕಲು ಯತ್ನಿಸಿದ್ದಾರೆಂದು ಹೇಳಲಾಗಿದ್ದು, ಗಂಭೀರ ಗಾಯಗೊಂಡಿರುವ ಆಕೆಯನ್ನು ಈಗ ಅಲಿಘರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಸೆಪ್ಟೆಂಬರ್ 14 ರಂದು ತನ್ನ ಸಾಕು ಪ್ರಾಣಿಗಳಿಗೆ ಮೇವು ಸಂಗ್ರಹಿಸಲು ಹೋಗಿದ್ದಾಗ ನಾಲ್ವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಮಂಗಳವಾರ ಪೊಲೀಸರಿಗೆ ತಿಳಿಸಿದ್ದಾರೆ. ‘ದಿ ಇಂಡಿಯನ್ ಎಕ್ಸ್’ಪ್ರೆಸ್ ಪ್ರಕಾರ, ಬಾಲಕಿಯ ನಾಲಿಗೆಯನ್ನು ಕತ್ತರಿಸಲಾಗಿದ್ದು, ಆಕೆಯ ಬೆನ್ನುಹುರಿ ಮತ್ತು ಕುತ್ತಿಗೆಗೆ ತೀವ್ರ ಗಾಯಗಳಾಗಿವೆ. ಆಸ್ಪತ್ರೆಯ ಆರಂಭಿಕ ವೈದ್ಯಕೀಯ ವರದಿಯು ಕತ್ತು ಹಿಸುಕಿರುವುದು ಮತ್ತು ಹಲ್ಲೆ ಮಾಡಿರುವುದನ್ನು ದೃಢಪಡಿಸಿದೆ. ಅತ್ಯಾಚಾರವನ್ನು ದೃಢೀಕರಿಸಲು ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆಕೆಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸಂದೀಪ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಕೊಲೆ ಯತ್ನಕ್ಕಾಗಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಮ್ ಬಂಧಿಸಲಾಗಿದೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಸಾಮೂಹಿಕ ಅತ್ಯಾಚಾರದ ಆರೋಪವನ್ನು ಎಫ್‌ಐಆರ್‌ಗೆ ಸೇರಿಸಲಾಗಿದ್ದು, ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಥ್ರಾಸ್ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ಮಂಗಳವಾರ ‘ಟೈಮ್ಸ್ ಆಫ್ ಇಂಡಿಯಾ’ ಜೊತೆ ಮಾತನಾಡುತ್ತಾ ಹೇಳಿದ್ದಾರೆ. “ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಇತರರನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ವೀರ್ ಹೇಳಿದರು.

Join Whatsapp