ಬೆಂಗಳೂರು: ಬಾಗಲಕೋಟೆ ಜಮಖಂಡಿಯ ದಲಿತ ಮುಖಂಡ ಹಾಗೂ ಹೋರಾಟಗಾರ ಯಮನಪ್ಪ ಗುಣದಾಳ ಮತ್ತು ಅಡ್ವಕೇಟ್ ಎಂ.ಕೆ ಮೇತ್ರಿ ಅವರನ್ನು ರಾಜ್ಯ ಸಮಿತಿ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ರಾಜ್ಯ ಸಮಿತಿ ಸದಸ್ಯರು ಪಕ್ಷ ವಹಿಸುವ ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸುವರು ಎಂಬ ಭರವಸೆ ಇದೆ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.