ಬಿಜೆಪಿ ಕಚೇರಿಯೊಳಗೆ ದಲಿತ ಜನಪ್ರತಿನಿಧಿ ಮೇಲೆ ಹಲ್ಲೆ: ದೂರು ದಾಖಲು

Prasthutha|

ದೊಡ್ಡಬಳ್ಳಾಪುರ: ಬಿಜೆಪಿ ಕಚೇರಿಯೊಳಗೆ ದಲಿತ ಜನಪ್ರತಿನಿಧಿ ಮೇಲೆ ಜಾತಿ ನಿಂದನೆ ಮತ್ತು ಹಲ್ಲೆ ಆರೋಪ ಕೇಳಿ ಬಂದಿದೆ. ಈ ಘಟನೆ ಕುರಿತು ಹಲ್ಲೆಗೊಳಗಾದ ನಗರ ಸದಸ್ಯ ಬಿಜೆಪಿ ಮುಖಂಡರ ವಿರುದ್ಧ ದೂರು ದಾಖಲಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮಕ್ಕೆ ಜನ ಸೇರದಿದ್ದಕ್ಕೆ ಬಿಜೆಪಿಯ ಮುಖಂಡರು ಪಕ್ಷದ ಕಚೇರಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ದಲಿತ ಸಮುದಾಯದ ನಗರಸಭಾ ಸದಸ್ಯ ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾಗ ಗಲಾಟೆ ಉಂಟಾಗಿದೆ. ಈ ವೇಳೆ ಬಿಜೆಪಿಯ ಮುಖಂಡರು ಜಾತಿ ನಿಂದನೆ ಮಾಡಿದ್ದಲ್ಲದೆ ಅವರ ಅಂಗಿ ಹರಿದು ಹಾಕಿ, ಒದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

- Advertisement -

ಈ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಆರ್​ ಶಿವಣ್ಣ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -