Home ಟಾಪ್ ಸುದ್ದಿಗಳು ಕೂಲಿ ಹಣ ಕೇಳಿದ ದಲಿತ ಯುವಕನ ಮೇಲೆ ಹಲ್ಲೆ: ಇಬ್ಬರ ಬಂಧನ

ಕೂಲಿ ಹಣ ಕೇಳಿದ ದಲಿತ ಯುವಕನ ಮೇಲೆ ಹಲ್ಲೆ: ಇಬ್ಬರ ಬಂಧನ

ಕೋಲಾರ: ಕೂಲಿ ಹಣ ಕೇಳಿದ್ದಕ್ಕಾಗಿ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.

ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


ಜಗದೀಶ್ ಸಿಂಗ್ ಜೊತೆಗೆ ರವೀಂದ್ರ ಸಿಂಗ್ ಹಾಗೂ ಸತೀಶ್ ಸಿಂಗ್ ಎಂಬುವರು ಹಲ್ಲೆ ನಡೆಸಿದ್ದಾರೆ.


ಗ್ರಾಮದ ಅಮರೇಶ್ ಎಂಬುವನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ.


ಹಲ್ಲೆಗೊಳಗಾದ ಅಮರೇಶ್ ಗಾರೆ ಕೆಲಸ ಮಾಡಿಕೊಂಡಿದ್ದು, ಅದೇ ಗ್ರಾಮದ ಜಗದೀಶ್ ಸಿಂಗ್ ಎಂಬುವರ ಹೊಸ ಮನೆ ನಿರ್ಮಾಣದ ಕೆಲಸಕ್ಕೆ ಹೋಗುತ್ತಿದ್ದ. ಅಲ್ಲಿ ಕೆಲಸ ಮಾಡಿದ್ದರಿಂದ ಕೂಲಿ ಕೇಳಿದ್ದಕ್ಕೆ ಜಗದೀಶ್ ಸಿಂಗ್ ಎಂಬುವರು ಅಮರೇಶ್ ಮೇಲೆ ಹಲ್ಲೆ ನಡೆಸಿದ್ದು ಜಾತಿ ನಿಂದನೆ ಮಾಡಿದ್ದಾರೆ.

Join Whatsapp
Exit mobile version