ದಲಿತ ಯುವಕನನ್ನು ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರು ಕೊಂದು ಹಾಕಿದ್ದಾರೆ : ಕಾಂಗ್ರೆಸ್ ವಾಗ್ದಾಳಿ

Prasthutha|

ಬೆಂಗಳೂರು: ದಲಿತ ಯುವಕನನ್ನು ಬ್ರಿಗೇಡ್ ಹೆಸರಲ್ಲಿ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರು ಕೊಂದು ಹಾಕಿದ್ದಾರೆ ಎಂದು ಬಿಜೆಪಿ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

- Advertisement -

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಸಂಚಾಲಕನ ಹತ್ಯೆ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಅದ್ಯಾವುದೋ ಬ್ರಿಗೇಡ್ ಹೆಸರಲ್ಲಿ ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು. ದಲಿತರೆಂದರೆ ಬಿಜೆಪಿ ನಾಯಕರಿಗೆ ಯಾಕಿಷ್ಟು ಅಸಹನೆ? ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು. ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ? ಎಂದು ಪ್ರಶ್ನೆ ಮಾಡಿದೆ.