ಕಾಂಗ್ರೆಸ್ ನ ನಡೆಯ ಬಗ್ಗೆ ದಲಿತರು ಎಚ್ಚರಿಕೆಯಿಂದ ಇರಬೇಕು: ಮಾಯಾವತಿ

Prasthutha|

ಲಕ್ನೋ: ದಲಿತ ಸಿಖ್ ಸಮುದಾಯದ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ನ ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕಾಂಗ್ರೆಸ್ ನ ಚುನಾವಣಾ ತಂತ್ರವಾಗಿದೆ. ಕಾಂಗ್ರೆಸ್ ನ ಈ ನಡೆಯ ಬಗ್ಗೆ ದಲಿತರು ಎಚ್ಚರಿಕೆಯಿಂದ ಇರಬೇಕು ಎಂದು ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.


ಕಾಂಗ್ರೆಸ್ ಪಕ್ಷವು, ಪಂಜಾಬ್ ನಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಚನ್ನಿ ನೇತೃತ್ವದಲ್ಲಿ ಎದುರಿಸುವುದಿಲ್ಲ. ಬದಲಾಗಿ, ದಲಿತೇತರರ ನಾಯಕತ್ವದಲ್ಲಿ ಎದುರಿಸಲಿದೆ. ಪಂಜಾಬ್ ಇರಲಿ, ಉತ್ತರಪ್ರದೇಶ ಅಥವಾ ಬೇರಾವುದೇ ರಾಜ್ಯವಿರಲಿ, ಜಾತಿವಾದಿ ಪಕ್ಷಗಳು ದಲಿತರಿಗೆ, ಹಿಂದುಳಿದವರಿಗೆ ಏನೇ ಸ್ಥಾನ ನೀಡುತ್ತಿವೆ ಎಂದರೂ ಅದು ಸ್ವಾರ್ಥಕ್ಕಾಗಿಯೇ ಹೊರತು ದಲಿತರ ಏಳಿಗೆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -


ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಯಾವತಿ, ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿಂದುಳಿದವರ ಮೇಲೆ ಏಕಾಏಕಿ ಪ್ರೀತಿ ಹುಟ್ಟಿಕೊಂಡಿದೆ. ಬಿಜೆಪಿಯ ಬಗ್ಗೆನೂ ದಲಿತರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

- Advertisement -