ಅಪಾಯಕಾರಿ ಸಂಖ್ಯೆಯಲ್ಲಿ ಅಪರಾಧಿಗಳು ಸಂಸತ್ , ವಿಧಾನಸಭೆ ಪ್ರವೇಶಿಸುತ್ತಿರುವುದು ಎಚ್ಚರಿಕೆಯ ಗಂಟೆ: ಹೈಕೋರ್ಟ್

Prasthutha|

ಲಕ್ನೋ: ಕಳೆದ ವರ್ಷ ಸುಪ್ರೀಂ ಕೋರ್ಟ್ ಎದುರು ಅತ್ಯಾಚಾರ ಸಂತ್ರಸ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಪಿ ಸಂಸದ ಅತುಲ್ ರಾಯ್ ಗೆ ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠ ಜಾಮೀನು ನಿರಾಕರಿಸಿದೆ.

- Advertisement -

ಅಪಾಯಕಾರಿ ಸಂಖ್ಯೆಯಲ್ಲಿ ಅಪರಾಧಿಗಳು ಸಂಸತ್ ಹಾಗೂ ವಿಧಾನಸಭೆ ಪ್ರವೇಶಿಸುತ್ತಿರುವುದು ಎಲ್ಲರಿಗೂ ಎಚ್ಚರಿಕೆಯ ಗಂಟೆ ಎಂದು ಜಾಮೀನು ಅರ್ಜಿಯನ್ನು ನಿರಾಕರಿಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದರು.

ಅಪರಾಧಿಗಳನ್ನು ರಾಜಕೀಯದಿಂದ ದೂರ ಇಡಬೇಕು, ಕ್ರಿಮಿನಲ್ ರಾಜಕಾರಣಿಗಳು ಮತ್ತು ಅಧಿಕಾರಶಾಹಿಯ ಅಪವಿತ್ರ ಮೈತ್ರಿ ಮುರಿಯಲು ಸಂಸತ್ತು ಮತ್ತು ಚುನಾವಣಾ ಆಯೋಗ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಏಕಸದಸ್ಯ ಪೀಠ ತಿಳಿಸಿದೆ.

- Advertisement -

ರಾಯ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ 24 ವರ್ಷದ ಯುವತಿ ಮತ್ತು ಆಕೆಯ ಸ್ನೇಹಿತ ಬೆಂಕಿ ಹಚ್ಚಿಕೊಂಡಿದ್ದರು. ಕೆಲ ದಿನಗಳ ನಂತ ಆಕೆ ಸಾವನ್ನಪ್ಪಿದ್ದರು. ರಾಯ್ ವಿರುದ್ಧ ಈವರೆಗೆ 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು ಅಪಹರಣ, ಕೊಲೆ, ಅತ್ಯಾಚಾರ ಇತರೆ ಅಪರಾಧಗಳು ಇದರಲ್ಲಿ ಸೇರಿವೆ ಎಂದು ನ್ಯಾಯಾಲಯ ಗಮನಿಸಿದೆ.

(ಕೃಪೆ: ಬಾರ್ & ಬೆಂಚ್)

Join Whatsapp