ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

Prasthutha|


ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ಎಂಬ ಮಾಹಿತಿ ಲಭ್ಯವಾಗಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು ಎನ್ನಲಾಗಿತ್ತು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

Join Whatsapp
Exit mobile version