ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡಕ್ಕೆ ಮತ್ತೆ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಗೊಂಡಿದ್ದಾರೆ.
ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಇದೇ ವೇಳೆ ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.