Home ಟಾಪ್ ಸುದ್ದಿಗಳು ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಸಂಬಂಧ ಜೈಲಿನಲ್ಲಿರುವ ನಟ ದರ್ಶನ್‌ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರ(ಆ.14ರಂದು) ಮತ್ತೆ ವಿಸ್ತರಣೆ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ , ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿ ನ್ಯಾಯಾಧೀಶ ವಿಶ್ವನಾಥ್‌ ಸಿ ಗೌಡರ್ ಅವರು ಆ.28ರವರೆಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.

Join Whatsapp
Exit mobile version