ಸೆಪ್ಟೆಂಬರ್ 5ರ ವರೆಗೆ ದರ್ಶನ್​’ಗೆ ಜೈಲೂಟವೇ ಗತಿ: ವಿಚಾರಣೆ ಮುಂದೂಡಿದ ಹೈಕೋರ್ಟ್

Prasthutha|

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮನೆ ಊಟ ಹಾಗೂ ಇತರೆ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು (ಆಗಸ್ಟ್ 20) ಹೈಕೋರ್ಟ್ ನ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

- Advertisement -


ಆರೋಗ್ಯ ಸಮಸ್ಯೆ, ನಿದ್ರಾಹೀನತೆ ಕಾಡುತ್ತಿರುವುದಾಗಿ ಕಾರಣ ನೀಡಿ, ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಳನ್ನು ತರಸಿಕೊಳ್ಳಲು ಅನುಮತಿ ಕೋರಿ ನಟ ದರ್ಶನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಪೀಠವು, ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ಹೇಳಿದ್ದರು. ಅಂತೆಯೇ ನಿರ್ಧಾರವನ್ನು ಹೈಕೋರ್ಟ್ಗೆ ನೀಡಿದ್ದ ಜೈಲು ಅಧಿಕಾರಿಗಳು ದರ್ಶನ್ಗೆ ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.


ಇಂದು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ, ವೈದ್ಯಾಧಿಕಾರಿಗಳು ದರ್ಶನ್ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಆದರೆ ದರ್ಶನ್ ಪರ ವಕೀಲರು ವೈದ್ಯಾಧಿಕಾರಿಗಳ ವರದಿ ನೋಡಿ ವಾದಮಂಡನೆಗೆ ಸಮಯ ಬೇಕಾಗುತ್ತದೆಯಾದ್ದರಿಂದ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಂತೆಯೇ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿದರು.



Join Whatsapp