Home ಟಾಪ್ ಸುದ್ದಿಗಳು ದರ್ಶನ್ ಗೆ ಜಾಮೀನು: ಹೈಕೋರ್ಟ್ ತೀರ್ಪು ಸ್ವಾಗತಾರ್ಹ; ಡಿಕೆ ಶಿವಕುಮಾರ್

ದರ್ಶನ್ ಗೆ ಜಾಮೀನು: ಹೈಕೋರ್ಟ್ ತೀರ್ಪು ಸ್ವಾಗತಾರ್ಹ; ಡಿಕೆ ಶಿವಕುಮಾರ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್ ತೀರ್ಪನ್ನು ಸರ್ಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.


ನ್ಯಾಯಾಲಯದ ತೀರ್ಪನ್ನು ನಾನು ಪ್ರಶ್ನಿಸುವುದಿಲ್ಲ, ನ್ಯಾಯಾಲಯದ ತೀರ್ಪನ್ನು ಸರಕಾರ ಗೌರವಯುತವಾಗಿ ಸ್ವಾಗತಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.


ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಆರು ವಾರಗಳ ಅವಧಿಗೆ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Join Whatsapp
Exit mobile version