ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಅ.14 ರಂದು ಆದೇಶ ಪ್ರಕಟ

Prasthutha|

ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ.

- Advertisement -


ಇಂದು ದರ್ಶನ್ ಪರ ಹಿರಿಯ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.


ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು.

- Advertisement -


ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದರೆ ಪವಿತ್ರಾ ಗೌಡ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದಾರೆ.



Join Whatsapp