Home ಟಾಪ್ ಸುದ್ದಿಗಳು ದರ್ಶನ್ ಅಭಿಮಾನಿಗಳ ಹುಚ್ಚುತನ: ಮಗುವಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್

ದರ್ಶನ್ ಅಭಿಮಾನಿಗಳ ಹುಚ್ಚುತನ: ಮಗುವಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್

ಬೆಂಗಳೂರು: ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಿತಿ ಮೀರಿದ್ದು, ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ್ದಾರೆ.


ಈ ಫೋಟೋ ವೈರಲ್ ಆಗುತ್ತಿದೆ. ‘Brand of sandalhood dboss fans Mysore’ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್ ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು ಬರೆಯಲಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version