ಬೆಂಗಳೂರು: ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿದ ಪೊಲೀಸರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ 3991 ಪುಟಗಳ ವಿವರವಾದ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಆರೋಪ ಪಟ್ಟಿಯಲ್ಲಿ ಕೊಲೆಯ ವಿವರ, ಸ್ಥಳ ಮಹಜರು, ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸಾಕ್ಷಿಗಳ ಹೇಳಿಕೆ, ಸಾಕ್ಷ್ಯಗಳ ಮಾಹಿತಿ ಇನ್ನೂ ಹಲವು ಅಂಶಗಳನ್ನು ಸೇರಿಸಲಾಗಿದೆ.
ಆರೋಪ ಪಟ್ಟಿ ದಾಖಲು ಮಾಡಿದಾಗಿನಿಂದಲೂ ಆರೋಪ ಪಟ್ಟಿಯಲ್ಲಿರುವ ಅಂಶಗಳು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವರದಿ ಆಗುತ್ತಲೇ ಇವೆ.
ದರ್ಶನ್, ಪವಿತ್ರಾ ಹಾಗೂ ರೇಣುಕಾ ಸ್ವಾಮಿಯ ಕೆಲವು ಫೋಟೊಗಳು ಸಹ ಹರಿದಾಡುತ್ತಿವೆ.
ಆದರೆ ಇದೀಗ ಹೈಕೋರ್ಟ್ ಸೂಚನೆಯೊಂದನ್ನು ನೀಡಿದ್ದು, ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.
ಆರೋಪ ಪಟ್ಟಿಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಅಥವಾ ಪ್ರಿಂಟ್ ಮಾಡದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಿದೆ.