ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ ನ ಅನ್​ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ

Prasthutha|

ಬೆಂಗಳೂರು: ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ.

- Advertisement -

ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ ಸ್ಟಾಗ್ರಾಮ್​ ಪ್ರಾಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು.

- Advertisement -

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.

Join Whatsapp