ಬೆಂಗಳೂರು: ದರ್ಶನ್ ಅವರು ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ.
ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ ಸ್ಟಾಗ್ರಾಮ್ ಪ್ರಾಫೈಲ್ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.
ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.