ದಸರಾ, ದುರ್ಗಾ ಪೂಜೆ ಹಿನ್ನೆಲೆ: ಮತ್ತೊಂದು ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

Prasthutha|

►ದಸರಾ ಸಾಂಸ್ಕೃತಿ ಕಾರ್ಯಕ್ರಮದಲ್ಲಿ 500 ಮಂದಿ ಭಾಗವಹಿಸಲು ಅವಕಾಶ

- Advertisement -

ಬೆಂಗಳೂರು: ರಾಜ್ಯದಲ್ಲಿ ದಸರಾ ಹಾಗೂ ದುರ್ಗಾ ಪೂಜೆ ಆಚರಣೆಗಳಿಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಎಲ್ಲ ಜಿಲ್ಲಾಡಳಿತಗಳು ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸುವಂತೆ ಸರ್ಕಾರ ಆದೇಶಿಸಿದೆ.
ಮೈಸೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ದಸರಾ ಹಾಗೂ ದುರ್ಗಾಪೂಜೆ ಆಚರಣೆಯಲ್ಲಿ 400 ಕ್ಕೂ ಅಧಿಕ ಮಂದಿ ಸೇರುವಂತಿಲ್ಲ ಎಂದು ತಿಳಿಸಲಾಗಿದೆ.
ಮೈಸೂರಿನಲ್ಲಿ ದಸರಾ ಪ್ರಯುಕ್ತ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 500 ಮಂದಿ ಸೇರಲು ಅನುಮತಿಯಿದೆ. ಚಾಮುಂಡಿ ಬೆಟ್ಟದಲ್ಲಿ 100 ಮಂದಿ ಮತ್ತು ವಿಜಯದಶಮಿ ಪ್ರಯುಕ್ತ ನಡೆಯಲಿರುವ ಜಂಬೂ ಸವಾರಿಯಲ್ಲಿ 500 ಮಂದಿ ಸೇರಬಹುದಾಗಿದೆ.
ದಸರಾ ವರದಿಗಾಗಿ ತೆರಳುವ ಮಾಧ್ಯಮ ಸಿಬ್ಬಂದಿ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಡಬೇಕಾಗಿದೆ. ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ಸಾರ್ವಜನಿಕರು ಆನ್ ಲೈನ್ ಮಾಧ್ಯಮ ಅಥವಾ ದೂರದರ್ಶನ ವಾಹಿನಿಯಲ್ಲಿ ದಸರಾದ ನೇರ ಪ್ರಸಾರ ವೀಕ್ಷಿಸಬೇಕೆಂದು ಮನವಿ ಮಾಡಲಾಗಿದೆ.

Join Whatsapp