ನಾಳೆ ದಸರಾ ಜಂಬೂಸವಾರಿ: ಲಕ್ಷಾಂತರ ಮಂದಿ ಭಾಗಿ ನಿರೀಕ್ಷೆ

Prasthutha|

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಮೆರವಣಿಗೆಯು ಮಂಗಳವಾರ (ಅ.24) ನಡೆಯಲಿದೆ.

- Advertisement -


ದಸರಾ ಉತ್ಸವದ ಮುಖ್ಯ ಘಟ್ಟವಾದ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.


ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಪ್ರದರ್ಶಿಸುತ್ತಾ ‘ರಾಜಪಥ’ದಲ್ಲಿ ಸಾಗಲು ಕಲಾತಂಡಗಳು, ಸ್ತಬ್ಧಚಿತ್ರಗಳು ಸಜ್ಜಾಗಿವೆ. ಅರಮನೆ ಆವರಣದಲ್ಲಿ ಜಂಬೂಸವಾರಿ ವೀಕ್ಷಣೆಗೆ 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ.

- Advertisement -


ಅರಮನೆಯ ಬಲರಾಮ ದ್ವಾರದಲ್ಲಿ ಮಂಗಳವಾರ ಮಧ್ಯಾಹ್ನ1.46ರಿಂದ 2.08ರೊಳಗೆ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4.40ರಿಂದ 5ರವರೆಗೆ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಮೇಯರ್ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Join Whatsapp