ದಸರಾ ಕವಿಗೋಷ್ಠಿ : ಉದ್ಘಾಟಕರ ಪಟ್ಟಿಯಿಂದ ಪ್ರೊ ಭಗವಾನ್ ಹೆಸರು ಕೈಬಿಟ್ಟ ಆಯೋಜಕರು

Prasthutha|

ಮೈಸೂರು: ಒಕ್ಕಲಿಗರ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಖಾಸಗಿಯಾಗಿ ಏರ್ಪಡಿಸಿದ್ದ ದಸರಾ ಯುವ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಕರ ಪಟ್ಟಿಯಿಂದ ಪ್ರೊ. ಕೆ.ಎಸ್. ಭಗವಾನ್ ಅವರ ಹೆಸರನ್ನು ಕೈಬಿಡಲಾಗಿದೆ.

- Advertisement -


ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ವತಿಯಿಂದ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಇಂದು (ಅ.16) ಬೆಳಗ್ಗೆ ನಡೆದಿರುವ ದಸರಾ ಯುವ ಕವಿಗೋಷ್ಠಿಯ ಉದ್ಘಾಟನೆಯನ್ನು ಸಾಹಿತಿ ಮತ್ತು ವಿಚಾರವಾದಿ ಪ್ರೊ. ಕೆ.ಎಸ್. ಭಗವಾನ್ ಅವರ ಬದಲಿಗೆ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಹಾಗೂ ಸಾಹಿತಿ ಡಾ. ಡಿ.ಕೆ. ರಾಜೇಂದ್ರ ಉದ್ಘಾಟಿಸಿದ್ದಾರೆ.