Home ಟಾಪ್ ಸುದ್ದಿಗಳು ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ದಿನಾಂಕ ಫಿಕ್ಸ್ !

ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ದಿನಾಂಕ ಫಿಕ್ಸ್ !

ಬೆಂಗಳೂರು: ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಮಂಡಳಿಯ ಕಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಸಮ್ಮುಖದಲ್ಲಿ ಚುನಾವಣೆ ನಡೆಯಲಿದೆ.


ಡಾ.ಮುಹಮ್ಮದ್ ಯೂಸುಫ್ ಅವರ ನಿಧನದಿಂದ ತೆರವಾಗಿದ್ದ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ರಾಜ್ಯ ಸರ್ಕಾರ ಮುಹೂರ್ತ ನಿಗದಿ ಮಾಡಿದೆ.


ಚುನಾಯಿತ ಜನಪ್ರತಿನಿಧಿಗಳು, ಸರ್ಕಾರ ನಾಮ ನಿರ್ದೇಶನ ಮಾಡಿದವರು ಸೇರಿದಂತೆ 11 ಸದಸ್ಯರು ಮಂಡಳಿಯಲ್ಲಿದ್ದು, ಇದರಲ್ಲಿ ಓರ್ವರು ಅಧ್ಯಕ್ಷರಾಗಿ ಚುನಾಯಿತರಾಗುತ್ತಾರೆ.

Join Whatsapp
Exit mobile version