ಉಪಚುನಾವಣೆಗೆ ದಿನಾಂಕ ಪ್ರಕಟ: ಅ. 30ಕ್ಕೆ ಸಿಂಧಗಿ, ಹಾನಗಲ್ ಕ್ಷೇತ್ರಗಳಿಗೆ ಚುನಾವಣೆ

Prasthutha|

ಬೆಂಗಳೂರು: ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಈ ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

- Advertisement -


ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.
ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ಉದಾಸಿ ಅವರ ಪುತ್ರ ಸಂಸದ ಶಿವಕುಮಾರ ಉದಾಸಿ ಅವರನ್ನು ಕಣಕ್ಕಿಳಿಸಲಿದೆ ಎನ್ನಲಾಗಿದೆ.

- Advertisement -


ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಬಹುತೇಕ ಅವರೇ ಅಭ್ಯರ್ಥಿಯಾಗಲಿದ್ದಾರೆ. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಕೂಡ ಕಾರ್ಯತಂತ್ರ ರೂಪಿಸಿದೆ. ಎರಡೂ ಕ್ಷೇತ್ರಗಳಲ್ಲಿ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯಲಿದೆ ಎನ್ನಲಾಗುತ್ತಿದೆ. ಜೆಡಿಎಸ್ ಈಗಾಗಲೇ ಹಾನಗಲ್ ಗೆ ನಯಾಝ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ

Join Whatsapp