ಮಂಡ್ಯ: ವರ್ಗಾವಣೆ ಹೊಂದಿ ಹೊಸ ಸ್ಥಳಗಳಿಗೆ ನೇಮಕಗೊಳ್ಳುವುದು, ಈ ವೇಳೆ ಅಧಿಕಾರ ಹಸ್ತಾಂತರ ಮಾಡುವುದು ಸರ್ಕಾರಿ ಅಧಿಕಾರಿಗಳಿಗೆ ಸಮಾನ್ಯ ಸಂಗತಿ. ಆದರೆ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ಅಧಿಕಾರ ಹಸ್ತಾಂತರವೂ ಭಾವುಕ ಘಟನೆಗೆ ಸಾಕ್ಷಿಯಾಗಿದೆ.
ಹೌದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಸ್ ಐ ಆಗಿದ್ದ ಬಿ.ಎಸ್.ವೆಂಕಟೇಶ್ ಅವರು ಎಸ್ಪಿ ಕಚೇರಿಗೆ ವರ್ಗಾವಣೆಯಾಗಿದ್ದು ತಮ್ಮ ಮಗಳೂ ಆದ ನೂತನ ಎಸ್ ಐ ಬಿ.ವಿ.ವರ್ಷಾ ಅವರಿಗೆ ಜೂನ್ 20ರ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ರು. ಈ ಮೂಲಕ ಠಾಣೆಯ ಸಿಬ್ಬಂದಿ ಭಾವನಾತ್ಮಕ ಸನ್ನಿವೇಶಕ್ಕೆ ಸಾಕ್ಷಿಯಾದ್ರು. ಈ ವೇಳೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ್ದ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಅರ್ಥಶಾಸ್ತ್ರದಲ್ಲಿ ಎಂಎ ಪದವಿಯನ್ನೂ ಪಡೆದಿರುವ ವರ್ಷಾ ಅವರು 2022ರ ಬ್ಯಾಚ್ ನ ಪಿಎಸ್ ಐ ಆಗಿದ್ದಾರೆ. ಇವರು ಗುಲ್ಬರ್ಗಾದಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರ ಮೊದಲ ಪೋಸ್ಟಿಂಗ್ ಕೂಡ ಮಂಡ್ಯದಲ್ಲೇ ಆಗಿದ್ದು ತಂದೆಯಿಂದಲೇ ಚಾರ್ಚ್ ಪಡೆದು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ.