ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಮೃತ್ಯು

Prasthutha|

ದಾವಣಗೆರೆ: ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವಂತಹ ಘಟನೆ ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ.

- Advertisement -


ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು.


ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದಾರೆ. ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದರು. ಯೋಗೇಶ್, ಪ್ರತಿಭಾ ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಸಾವಿಗೆ ನಿಖರ ಕಾರಣ ತಿಳಿಸಿ ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ತಾಯಿ ಶೋಭಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Join Whatsapp