ದಾವಣಗೆರೆ: ಮಧ್ಯಾಹ್ನದ ಊಟದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, 5 ಮಕ್ಕಳ ಸ್ಥಿತಿ ಗಂಭೀರ

Prasthutha|

ದಾವಣಗೆರೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸುಮಾರು 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದಂತೆ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿ ಶುರುವಾಗಿದೆ. 5 ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಇದಕ್ಕೂ ಮುನ್ನ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡ ಪೊನ್ನಾಂಡಹಳ್ಳಿಯಲ್ಲಿ ಕಲುಷಿತ ನೀರನ್ನು ಸೇವಿಸಿ ಮೂವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡಪನ್ನಾಂಡ ಹಳ್ಳಿಯಲ್ಲಿ ಘಟನೆ ನಡೆದಿದೆ.

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡ ಪೊನ್ನಾಂಡಹಳ್ಳಿಯಲ್ಲಿ ನಡೆದಿದೆ.ಅಸ್ವಸ್ಥ ಮಕ್ಕಳನ್ನು ಗಿರೀಶ್, ಧನು, ಡಂಕಣಚಾರಿಗೆ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ಕುರಿತಂತೆ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp