Home ಕರಾವಳಿ ಮಂಗಳೂರು | ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಪ್ರಯಾಣಿಸುತ್ತಿದ್ದ ಕಾರು-ಲಾರಿ ಢಿಕ್ಕಿ

ಮಂಗಳೂರು | ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಪ್ರಯಾಣಿಸುತ್ತಿದ್ದ ಕಾರು-ಲಾರಿ ಢಿಕ್ಕಿ

ಮಂಗಳೂರು : ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತವೊಂದರಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ನಗರದ ನಂತೂರು ಬಳಿ ಈ ಅಪಘಾತ ಸಂಭವಿಸಿದೆ.

ಮುಂಜಾನೆ 5:15ರ ಸುಮಾರಿಗೆ ದಯಾನಂದ ಕತ್ತಲಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಲಾರಿ ಮತ್ತು ಇವರ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ.

ದಯಾನಂದ ಕತ್ತಲಸಾರ್ ಅವರಿಗೆ ಸಣ್ಣ ಪಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version