ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತಿಸಬಹುದೇ?: ಅಮಿತ್ ಶಾ ವಿರುದ್ಧ ದಯಾನಿಧಿ ಆಕ್ರೋಶ

Prasthutha|

ಚೆನ್ನೈ: ಬಿಜೆಪಿ ನಾಯಕಿ ಹಾಗೂ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿಂದಿಸಿರುವ ರೀತಿಯಲ್ಲಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

- Advertisement -


ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವಿವಾದ ಮತ್ತು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ದಯಾನಿಧಿ ಮಾರನ್ ಈ ಘಟನೆಯನ್ನು ‘ದುರದೃಷ್ಟಕರ’ ಎಂದು ಬಣ್ಣಿಸಿದ್ದಾರೆ.


“ಇದು ತುಂಬಾ ದುರದೃಷ್ಟಕರ. ತಮಿಳಿಸೈ ಅವರು ತೆಲಂಗಾಣ ಮತ್ತು ಪುದುಚೇರಿಯ ರಾಜ್ಯಪಾಲರಾಗಿದ್ದರು. ನಮಗೆ ಬೇಸರವಾಗುತ್ತಿದೆ” ಎಂದು ದಯಾನಿಧಿ ಮಾರನ್ ಹೇಳಿದ್ದಾರೆ.
“ಗೃಹ ಸಚಿವ ಅಮಿತ್ ಶಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಥವಾ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಕೂಡ ಇದೇ ರೀತಿ ಮಾಡುತ್ತಾರೆಯೇ? ತಮಿಳಿಸೈ ಅವರು ತಮಿಳುನಾಡಿನವರು ಎಂಬ ಕಾರಣಕ್ಕೆ ಆಕೆಯನ್ನು ಯಾವ ರೀತಿಯಲ್ಲಿ ಬೇಕಾದರೂ ನಡೆಸಿಕೊಳ್ಳಬಹುದೇ? ಇದು ಅತ್ಯಂತ ಅನಿರೀಕ್ಷಿತವಾದ ಘಟನೆಯಾಗಿದೆ” ಎಂದು ಮಾರನ್ ಹೇಳಿದ್ದಾರೆ.

- Advertisement -

Join Whatsapp