ಮೈಕ್ರೋ ಫೈನಾನ್ಸ್ ಮಟ್ಟ ಹಾಕಲು ಡಿಸಿಗೆ ಅಧಿಕಾರ: ಪರಮೇಶ್ವರ್

Prasthutha|

ತುಮಕೂರು: ಮೈಕ್ರೋ ಫೈನಾನ್ಸ್ ಸಮಸ್ಯೆ ಕುರಿತು ಸಿಎಂ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗಿದೆ. ಮೈಕ್ರೋ ಫೈನಾನ್ಸ್‌ಗಳಿಗೆ ಸಬಂಧಿಸಿದಂತೆ ಈಗಿರುವ ಕಾನೂನು ಬಲಪಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

- Advertisement -

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡಲು ಬಡವರಿಗೆ ತೊಂದರೆ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಾವಳಿ ನಿಯಂತ್ರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲಾಗುವುದು. ಸುಮೋಟೊ ಕೇಸ್ ತೆಗೆದುಕೊಳ್ಳಲು ಪೊಲೀಸರಿಗೆ ಅವಕಾಶವಿಲ್ಲ. ಇದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಅನಧಿಕೃತ ಫೈನಾನ್ಸ್ ಹಾವಳಿಯನ್ನು ಮಟ್ಟ ಹಾಕಲಾಗುವುದು. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ವರ್ಷ ಏಳು ಜನರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 14 ಪ್ರಕರಣ ದಾಖಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾನೂನು ಕ್ರಮ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.



Join Whatsapp