ಕೊರಳಪಟ್ಟಿ ಹಿಡಿಯುತ್ತೇನೆಂದ ಹಿಂಜಾವೇ ಮುಖಂಡ ಜಗದೀಶ್ ಕಾರಂತ ವಿರುದ್ಧ ಜಿಲ್ಲಾಧಿಕಾರಿ ದೂರು: ಪ್ರಕರಣ ದಾಖಲು

Prasthutha|

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿ ಹಿಡಿಯುತ್ತೀವಿ ಎಂದು ಬಹಿರಂಗ ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ್ದ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -


ಸರಕಾರಿ ಅಧಿಕಾರಿಗೆ ಹಲ್ಲೆ ಮಾಡಲು ಪ್ರಚೋದನೆ ಮತ್ತು ಬೆದರಿಕೆ ದೂರಿನನ್ವಯ ಜಗದೀಶ್ ಕಾರಂತ್ ವಿರುದ್ಧ 153, 117, 504, 506, 189 ಐಪಿಸಿ ಕಲಂ ಅಡಿ ಪ್ರಕರಣ ದಾಖಲಾಗಿದೆ.


ಇದೇ ನ.21ರಂದು ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಸಮಿತಿಯ ವತಿಯಿಂದ ಆಯೋಜಿಸಿದ್ದ ರುದ್ರಗಿರಿಯ ರಣಕಹಳೆ ಎಂಬ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ ಜಗದೀಶ್ ಕಾರಂತ್, ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21ಕ್ಕೆ ಎಲ್ಲರೂ ಸಿದ್ಧರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ದ.ಕ. ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿ ಹಿಡಿಯುತ್ತೇವಿ. ತಾಕತ್ತಿದ್ದರೆ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸೋ..ಇಲ್ಲವಾದರೇ ಟ್ರಾನ್ಸ್ಫರ್ ತೆಗೆದುಕೊಂಡು ಹೋಗೋ.. ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿದ್ದಾರೆ. ಅಲ್ಲದೆ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪರಾಧಕ್ಕೆ ದುಷ್ಪ್ರೇರಣೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.



Join Whatsapp