ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಹೀಗೆ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

- Advertisement -

ಸಭೆಯ ಮುಖ್ಯಾಂಶಗಳು ಹೀಗಿವೆ

1. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಂದರೆ, ಮಾರ್ಚ್‌ ಒಂದರಿಂದ ಈ ವರೆಗೆ 87 ಮಿ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಈ ವರ್ಷ 123 ಮಿ.ಮೀ. ಮಳೆ ಆಗಿದೆ. ಅದರಲ್ಲಿ 8 ಜಿಲ್ಲೆಗಳಲ್ಲಿ ಅತ್ಯಧಿಕ ಹಾಗೂ 8 ಜಿಲ್ಲೆಗಳಲ್ಲಿ ವಾಡಿಕೆ ಮಳೆ ಆಗಿದೆ.

2. ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹಣಾ ಸಾಮರ್ಥ್ಯದ ಶೇ. 20 ರಷ್ಟು ನೀರು ಸಂಗ್ರಹವಾಗಿದೆ. ರಾಜ್ಯದಾದ್ಯಂತ ಮಳೆ ಆಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಇದು ಹೆಚ್ಚಳವಾಗುವ ನಿರೀಕ್ಷೆ ಇದೆ.

3. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ.

4. ಈ ಹಿನ್ನೆಲೆಯಲ್ಲಿ ಬರ ಪರಿಹಾರ ಕ್ರಮಗಳು ಮತ್ತು ಮುಂಗಾರು ಸಿದ್ಧತೆ ಮತ್ತು ಸಂಬಂಧಿಸಿದ ವಿಷಯಗಳ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಮಾಹಿತಿ ಪಡೆಯಲಾಯಿತು. ಹಾಗೂ ಕೆಲವು ಸೂಚನೆಗಳನ್ನು ನೀಡಲಾಯಿತು

.

Join Whatsapp
Exit mobile version