ಸಿನಿಮಾ ಶೂಟಿಂಗ್ ಗೆ ಬಳಸುತ್ತಿದ್ದ ಕಾರಿನಲ್ಲಿ ಮೃತ ದೇಹ ಪತ್ತೆ

Prasthutha|

ಬೆಂಗಳೂರು: ಸಿನಿಮಾ ಶೂಟಿಂಗ್ ಗಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಾರೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯ ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

- Advertisement -

ಮೃತ ವ್ಯಕ್ತಿಯು ಸುಮಾರು 45 ವರ್ಷದವರಾಗಿದ್ದು, ಗುರುತು ಪತ್ತೆಯಾಗಿಲ್ಲ. ಶುಕ್ರವಾರ ಮಧ್ಯಾಹ್ನ ಕಾರಿನ ಬಳಿ ಕೆಟ್ಟ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸ್ಥಳೀಯರು ಕಾರಿನ ಬಾಗಿಲು ತೆರೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.



Join Whatsapp