ಇಬ್ಬರು ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ

Prasthutha|


ಕೋಟಾ: ರಾಜಸ್ಥಾನದ ಕೋಟಾದಲ್ಲಿ ಮತ್ತೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

- Advertisement -


ಅವಿಷ್ಕರ್ ಶುಭಾಂಗಿ ಮತ್ತು ಬಿಹಾರದ ವಿದ್ಯಾರ್ಥಿ ಆದರ್ಶ್ ಆತ್ಮಹತ್ಯೆ ಮಾಡಿಕೊಂಡವರು.

ಅವಿಷ್ಕರ್ ಶುಭಾಂಗಿ ಮಹಾರಾಷ್ಟ್ರ ಮೂಲದವರಾಗಿದ್ದು, ಕೋಟಾದಲ್ಲಿ ತನ್ನ ಅಜ್ಜಿಯೊಂದಿಗೆ ನೆಲೆಸಿದ್ದರು.

- Advertisement -

ಪರೀಕ್ಷೆ ಬರೆದ ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಆರನೇ ಮಹಡಿಯಿಂದ ಜಿಗಿದಿದ್ದ ಅವಿಷ್ಕರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಕೋಟಾದ ಕುಣಡ್ಡಿಯಲ್ಲಿ ಬಿಹಾರ ಮೂಲದ ವಿದ್ಯಾರ್ಥಿ ಆದರ್ಶ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸಂಖ್ಯೆ ಈ ವರ್ಷ 23 ಕ್ಕೆ ಏರಿಕೆಯಾಗಿದೆ.