ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಗಡುವು ವಿಸ್ತರಣೆ

Prasthutha|

ನವದೆಹಲಿ: ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮಾರ್ಚ್ 31, 2024 ರವರೆಗೆ ವಿಸ್ತರಿಸಿದೆ.

- Advertisement -

ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ 2023 ರ ಏಪ್ರಿಲ್ 1 ರಿಂದ 2024 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಿನ್ನೆ ಹೊರಡಿಸಿದ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಆಧಾರ್ ಅನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡುವುದು ಸ್ವಯಂಪ್ರೇರಿತವಾಗಿದೆ. ಅದನ್ನು ಲಿಂಕ್ ಮಾಡಲು ಮತದಾರರ ಒಪ್ಪಿಗೆಯನ್ನು ಪಡೆಯಬೇಕಾಗಿದೆ ಎಂದು ಕಾನೂನು ಸಚಿವಾಲಯ ಈ ಹಿಂದೆ ಸ್ಪಷ್ಟಪಡಿಸಿತ್ತು.

- Advertisement -

ಈ ಪ್ರಕರಣ ಸುಪ್ರೀಂ ಕೋರ್ಟ್’ನಲ್ಲಿ ವಿಚಾರಣೆಗೆ ಬಾಕಿ ಇದೆ.

ಮತದಾರರ ಪಟ್ಟಿಯಲ್ಲಿನ ನಮೂದನ್ನು ದೃಢೀಕರಿಸಲು ಅಸ್ತಿತ್ವದಲ್ಲಿರುವ ಮತದಾರರಿಗೆ ತಮ್ಮ ಆಧಾರ್ ಸಂಖ್ಯೆಯನ್ನು ಬಳಸಲು ಅವಕಾಶ ನೀಡುವ ನಿಯಮಗಳನ್ನು ಸಚಿವಾಲಯವು ಜೂನ್ 2022 ರಲ್ಲಿ ಪ್ರಕಟಿಸಿತ್ತು.

ಭಾರತದ ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿದ ನಂತರ, ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 28 ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಲು ಕೇಂದ್ರ ಸರ್ಕಾರವು ಮಾಡಿದ ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು, 2022 ಈ ಉದ್ದೇಶಕ್ಕಾಗಿ ವಿಶೇಷ ನಿಬಂಧನೆಯನ್ನು ಹೊಂದಿದೆ.

Join Whatsapp