ಮಂಗಳೂರಿನ ಖಾಸಗಿ ಆಸ್ಪತ್ರೆಯ ಡೀನ್ ನಾಪತ್ತೆ

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರ ಡೀನ್ ನಾಪತ್ತೆಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ, ಶೋಧ ನಡೆಸುತ್ತಿದ್ದಾರೆ.

ಡಾ.ಅರ್ಬನ್ ಡಿ’ಸೋಜಾ ಎಂಬವರು ಸೆ.25ರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ನಗರದ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಡಾ.ಡಿ’ಸೋಜಾ ಅವರು ಭಾನುವಾರ ರಾತ್ರಿ ಬೇಗನೇ ವಾಪಸ್ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಬಂದಿದ್ದು, ಬಳಿಕ ಮನೆಗೆ ಹಿಂತಿರುಗಲೇ ಇಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ . ಆ ನಂತರ ಎಷ್ಟೇ ಪ್ರಯತ್ನಪಟ್ಟರೂ ಅವರು ಸಂಪರ್ಕಕ್ಕೆ ಸಿಗದಿದ್ದು, ಅವರ ಮೊಬೈಲ್ ಫೋನ್ ಸಹ ಸ್ವಿಚ್ ಆಫ್ ಆಗಿದೆ ಎಂದು ಪತ್ನಿ ತಿಳಿಸಿದ್ದಾರೆ.

- Advertisement -