ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ

Prasthutha|

ಬೆಂಗಳೂರು: ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

- Advertisement -


ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 38.75 ರಿಂದ ಶೇ. 42.5ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


ದಿನಾಂಕ 01/01/2024 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.



Join Whatsapp