ಬೆಂಗಳೂರು: ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ ಪ್ರಕರಣಗಳ ತನಿಖೆ ನಡೆಸಲು ಮೂವರ ಅಧಿಕಾರಿಗಳ ತಂಡ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೊಪ್ಪಳದ ಬಸರಿಹಾಳ, ಕುಷ್ಠಗಿಯ ಬಿಜಕಲ್ ಗ್ರಾಮದ ವಾಂತಿ ಭೇದಿ ಪ್ರಕರಣ ಮತ್ತು ದೇವದುರ್ಗದ ರೇಕಲಮಡಿಯಲ್ಲಿ ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿತ್ತು.
ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆಯುಕ್ತರು ಪಂಚಾಯತ್ ರಾಜ್ ಇಲಾಖೆ ಆಯುಕ್ತಾಲಯ, ಚಂದ್ರಹಾಸ್ ಅಧೀಕ್ಷಕ ಅಭಿಯಂತರರು, ಬಿ.ಆರ್. ವೆಂಕಟೇಶ್ ರಾಜತಾಂತ್ರಿಕ ಸಮಾಲೋಚಕರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರನ್ನು ನೇಮಿಸಲಾಗಿದೆ.
3 ಅಧಿಕಾರಗಳ ತಂಡ ಕೂಲಂಕುಷವಾಗಿ ತನಿಖೆ ನಡೆಸಿ ಇದೇ ತಿಂಗಳು 20ರೊಳಗೆ ವರದಿ ನೀಡುವಂತೆ ಸೂಚಿಸಿದೆ.