ಶಿವಮೊಗ್ಗ ಗಲಾಟೆ | ಎನ್ ಕೌಂಟರ್ ನಲ್ಲಿ ಮುಸ್ಲಿಮ್ ಯುವಕ ಮೃತ್ಯು ಎಂಬುವುದು ಸುಳ್ಳು: ಎಸ್ಪಿ ಸ್ಪಷ್ಟನೆ

Prasthutha|

ಶಿವಮೊಗ್ಗ: ರಾಗಿಗುಡ್ಡದಲ್ಲಿ ಪೊಲೀಸ್ ಎನ್ ಕೌಂಟರ್ ನಲ್ಲಿ ಮುಸ್ಲಿಮ್ ಯುವಕ ಮೃತಪಟ್ಟಿದ್ದಾನೆ ಎಂದು ಹೇಳುವ ಧ್ವನಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಇದು ಸುಳ್ಳು, ಇಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಪಿ ಮಿಥುನ್ ಕುಮಾರ್, ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿ ಕೊಡಬೇಡಿ. ಪೊಲೀಸರಿಂದ ಎನ್ ಕೌಂಟರ್ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಮೆಸೇಜ್ ಹಾಕಿದವರ ವಿರುದ್ಧ ಈಗಾಗಲೇ ಎಫ್ ಐಆರ್ ದಾಖಲಾಗಿದೆ ಎಂದು ತಿಳಿಸಿದರು.