ಗಾಝಾ: ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಈವರೆಗೂ 25,105 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ. ಅಲ್ಲದೆ,62,681 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸಚಿವಾಲಯ ನೀಡಿರುವ ಮಾಹಿತಿ ನೀಡಿದೆ.
ಇಸ್ರೇಲ್ ದಾಳಿ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 178 ಮಂದಿ ಗಾಝಾದಾದ್ಯಂತ ಸಾವನ್ನಪ್ಪಿದ್ದಾರೆ ಎಂದೂ ಸಚಿವಾಲಯ ತಿಳಿಸಿದ್ದು, ಹತ್ತಾರು ಜನರು ಇನ್ನೂ ಅವಶೇಷಗಳಡಿಯಲ್ಲಿದ್ದಾರೆ ಎಂದು ಸಚಿವಾಲಯದ ಮಾಧ್ಯಮ ಕಚೇರಿ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.