ಬಸ್- ಕಾರು ನಡುವೆ ಅಪಘಾತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

Prasthutha|

ಮೈಸೂರು: ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

- Advertisement -

ಬಿಳ್ಯಾಳ ಮಂಜುನಾಥ್ (35), ಇವರ ಪತ್ನಿ ಪೂರ್ಣಿಮಾ (30), ಮಗ ಪವನ (10), ಕಾರ್ತಿಕ (08), ಸಂದೀಪ (24), ತಾಯಿ ಸುಜಾತ ( 40), ತಂದೆ ಕೊಟ್ರೇಶ್ (45), ಪತ್ನಿ ಗಾಯತ್ರಿ (35), ಮಗಳು ಶ್ರಾವ್ಯ ( 03) ಹಾಗೂ ಇನೋವಾ ಚಾಲಕ ಮೈಸೂರಿನ ಆದಿತ್ಯ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

Join Whatsapp