ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಗಾಯಾಳು ಮೃತಪಟ್ಟಿದ್ದು,
ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಗಂಭೀರ ಗಾಯಗೊಂಡಿದ್ದ ನಿಯಾಝ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.